ವಿಧಾನಸಭಾ ಅಧಿವೇಶನದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಮಡಿಕೇರಿ : ವಿಧಾನಸಭಾ ಅಧಿವೇಶನದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನೇಕ ಮನೆಗಳು ಹಾನಿಗೊಂಡಿವೆ. ಅಂತಹ ಕುಟುಂಬಗಳಿಗೆ ಪರಿಹಾರ ಧನ ನೀಡಿ ಸೂಕ್ತ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು. ಮಡಿಕೇರಿ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳು ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟಿವೆ. ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಸದನದಲ್ಲಿ ಮನವಿ ಮಾಡಿದರು. ಜಿಲ್ಲೆ ಪ್ರತಿ ವರ್ಷ ಪ್ರಕೃತಿ ವಿಕೋಪಕ್ಕೆ ತುತ್ತಾಗುತ್ತಿದೆ. ಹೀಗಾಗಿ ಶಾಶ್ವತ ಪರಿಹಾರ ಮತ್ತು ಮುಂಜಾಗ್ರತಾ ಕ್ರಮಗಳಿಗೆ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದರು.