ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭ

| Published : Jun 29 2024, 12:31 AM IST

ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಈ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರು ಯಾವುದೇ ಸಮಯದಲ್ಲಿ ಪಠ್ಯಪುಸ್ತಕಗಳು, ನೂತನ ಶಿಕ್ಷಣ ನೀತಿಗೆ ಸಂಬಂಧಪಟ್ಟ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ಪರಾಮರ್ಶನ ಗ್ರಂಥಗಳು, ದಿನಪತ್ರಿಕೆಗಳು, ನಿಯತಕಾಲಿಕೆಗಳು, ಪದವಿ ಪರೀಕ್ಷೆಗಳ ಹಳೆಯ ಪ್ರಶ್ನೆಪತ್ರಿಕೆಗಳು, ೯೦೦೦ ಸಾವಿರಕ್ಕೂ ಅಧಿಕ ವಿರಳ ಕನ್ನಡದ ಪುಸ್ತಕಗಳು ಹಾಗೂ ಇತರ ಮಾಹಿತಿಯನ್ನು ಮೊಬೈಲ್ ಮತ್ತು ಕಂಪ್ಯೂಟರ್‌ನ್ನು ಬಳಸಿಕೊಂಡು ಮಾಹಿತಿಯನ್ನು ಪಡೆಯಬಹುದು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಅಜ್ಜರಕಾಡು ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಸಂಪೂರ್ಣ ಗಣಕೀಕೃತ ಸೇವೆಯನ್ನು ನೀಡುತ್ತಿದ್ದು, ಮಂಗಳೂರಿನ ಎಡ್‌ವೈಸ್ ಲರ್ನ್ ಸಂಸ್ಥೆಯ ಸಹಯೋಗದೊಂದಿಗೆ ಡಿಜಿಟಲ್ ಗ್ರಂಥಾಲಯವನ್ನು ಅನುಷ್ಟಾನಗೊಳಿಸಲಾಗಿದೆ.

ಇತ್ತೀಚೆಗೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಎಸ್. ಶೆಟ್ಟಿ ಈ ನೂತನ ಗ್ರಂಥಾಲಯಕ್ಕೆ ಅಧಿಕೃತ ಚಾಲನೆ ನೀಡಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕಿ ಯಶೋದಾ, ಎಡ್‌ವೈಸ್ ಲರ್ನ್‌ ಸಂಸ್ಥೆಯ ಸ್ಥಾಪಕ ಧೀರಜ್‌, ವಿಜ್ಞಾನ ವಿಭಾಗದ ಡೀನ್ ಪ್ರೊ.ಶ್ರೀಧರ್ ಪ್ರಸಾದ್, ಐಕ್ಯೂಎಸಿ ಸಂಚಾಲಕ ಪ್ರೊ.ಸೋಜನ್ ಕೆ.ಜಿ. ಉಪಸ್ಥಿತರಿದ್ದರು.