ಸಾರಾಂಶ
ಬಸವತಿರ್ಥ ಶಾಲೆಯ 48 ವಿದ್ಯಾರ್ಥಿಗಳು ಬೆಳಿಗ್ಗೆ ಉಪಹಾರ ಸೇವಿಸಿ ಅಸ್ವಸ್ಥರಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಲೇ ಸಿಇಒ ಡಾ.ಗಿರೀಶ ಬದೋಲೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಕರೆ ಮಾಡಿ ಸ್ಥಳಕ್ಕೆ ಧಾವಿಸಲು ಸೂಚಿಸಿದ್ದಲ್ಲದೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂಪಾಶಾ ಅವರಿಗೆ ಫೋನ್ ಮಾಡಿ ಸ್ಥಳಕ್ಕೆ ತೆರಳಲು ಸೂಚಿಸಿದರು. ಹುಮನಾಬಾದ್ ತಾ.ಪಂ ಅಧಿಕಾರಿ ದೀಪಿಕಾ ನಾಯಕ್ ಅವರಿಗೂ ಆಸ್ಪತ್ರೆಯಲ್ಲಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದರು. ಬಳಿಕ ಸಿಇಒ ಡಾ.ಗಿರೀಶ ಬದೋಲೆ ಆಸ್ಪತ್ರೆಗೆ ದೌಡಾಯಿಸಿ ಶಾಲಾ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ವೈದ್ಯರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮಗಳ ನಿರ್ದೇಶನ ನೀಡಿದರು. ಬಳಿಕ ಬಸವತಿರ್ಥ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿ ಅಶುಚಿತ್ವ ಮತ್ತು ಅನೈರ್ಮಲ್ಯಿಕರ ವಾತಾವರಣವನ್ನು ಕಂಡು ಶಾಲೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಡಿ ಡಿ ಪಿ ಐ ಅವರಿಗೆ ಸೂಚಿಸಿದರು. ತಾ.ಪಂ ಅಧಿಕಾರಿ ದೀಪಿಕಾ ಬಿ ನಾಯ್ಕರ , ತಹಸಿಲ್ದಾರ್, ತಾಲೂಕು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಮತ್ತು ಇನ್ನಿತರ ಇಲಾಖೆ ಅಧಿಕಾರಿಗಳು ಇದ್ದರು.
--ಚಿತ್ರ 13ಬಿಡಿಆರ್54
ಹುಮನಾಬಾದ ಸರ್ಕಾರಿ ಆಸ್ಪತ್ರೆಗೆ ಜಿ.ಪಂ ಸಿಇಓ ಡಾ. ಬದೋಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.--