ರೋಣ ಕ್ಷೇತ್ರದ ಶಾಸಕ ಜಿ.ಎಸ್‌.ಪಾಟೀಲ್‌ ಅವರಿಗೆ ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಬುಧವಾರ ಹಾಗೂ ಗುರುವಾರ ತುಮಕೂರಿನ ಸಿದ್ಧಗಂಗಾ ಮಠದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಬೆಂಗಳೂರು ನಿವಾಸದ ವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆ ನಡೆಸಲಿದ್ದಾರೆ.

ಡಂಬಳ: ರೋಣ ಕ್ಷೇತ್ರದ ಶಾಸಕ ಜಿ.ಎಸ್‌.ಪಾಟೀಲ್‌ ಅವರಿಗೆ ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಬುಧವಾರ ಹಾಗೂ ಗುರುವಾರ ತುಮಕೂರಿನ ಸಿದ್ಧಗಂಗಾ ಮಠದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಬೆಂಗಳೂರು ನಿವಾಸದ ವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆ ನಡೆಸಲಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾದ ಬಸವರಡ್ಡಿ ಬಂಡಿಹಾಳ, ಮರಿಯಪ್ಪ ಸಿದ್ದಣ್ಣವರ, ಕುಬೇರಪ್ಪ ಕೊಳ್ಳಾರ, ಮಹೇಶ ಗಡಗಿ, ಮಂಜುನಾಥ ಸಂಜಿವಣ್ಣವರ, ಸುರೇಶ ಗಡಗಿ, ಹನಮಂತಪ್ಪ ಗದಗಿನ, ಶರಣು ಬಂಡಿಹಾಳ, ಬಾಬುಸಾಬ ಮೂಲಿಮನಿ, ಮಲ್ಲಿಕಾರ್ಜುನ ಪ್ಯಾಟಿ, ರಾಜು ಆದಮ್ಮನವರ, ಮುತ್ತಣ್ಣ ಕೊಂತಿಕಲ್ಲ, ಬಸುರಾಜ ಶಿರೋಳ, ಸೌಕತಲಿ ಡೋಲಿ, ಮಹೇಶ ಬಿಸನಳ್ಳಿ, ಭೀಮಪ್ಪ ಗದಗಿನ, ತಿರಕಪ್ಪ ಕಟ್ಟೆಣ್ಣವರ, ಅಲ್ಲಾವುದ್ದಿನ ಹೊಂಬಳ, ಕಳ್ಳೆಪ್ಪ ಪೂಜಾರ, ಮಂಜುನಾಥ ನರಗುಂದ, ಮಾಬುಸಾಬ ಬೇಟಗೇರಿ, ಮರಿಯಪ್ಪ ಹಳ್ಳಾಕಾರ, ಮೆಹಬೂಬಸಾಬ ಆಲೂರ ಅವರು ಡಂಬಳದಿಂದ ಇಂದು ತುಮಕೂರಿಗೆ ತೆರಳಿದರು.ಜಿಎಸ್ಪಿಗೆ ಸಚಿವ ಸ್ಥಾನ ನೀಡಲಿ: ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ

ನರೇಗಲ್ಲ:

ರಾಜ್ಯದ ಮುತ್ಸದ್ದಿ ಶಾಸಕರು ಹಾಗೂ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ರೋಣ ಶಾಸಕ ಜಿ.ಎಸ್.ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಹಾಲಕೆರೆಯ ಶ್ರೀ ಅನ್ನದಾನೇಶ್ವರ ಮಠದ ಪೀಠಾಧಿಪತಿ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಸಕ ಜಿ.ಎಸ್. ಪಾಟೀಲರು ಜನಪರ ಕಾಳಜಿಯುಳ್ಳ ಹಾಗೂ ಕ್ಷೇತ್ರದ ಜನರ ವಿಶ್ವಾಸ ಗಳಿಸಿರುವ ಸಮರ್ಥ ನಾಯಕರಾಗಿದ್ದಾರೆ. ರೋಣ ಕ್ಷೇತ್ರ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಹೆಚ್ಚಿನ ಗಮನ ಹಾಗೂ ವಿಶೇಷ ಆದ್ಯತೆಯನ್ನು ಅಪೇಕ್ಷಿಸುತ್ತಿದೆ. ಕ್ಷೇತ್ರದ ಸಮಸ್ಯೆಗಳು, ಜನರ ಅಗತ್ಯಗಳು ಮತ್ತು ಅಭಿವೃದ್ಧಿಯ ಅವಶ್ಯಕತೆಗಳನ್ನು ಸಮರ್ಪಕವಾಗಿ ಅರಿತಿರುವ ಪಾಟೀಲರಿಗೆ ಸಚಿವ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ. ಪಾಟೀಲರಿಗೆ ಸಚಿವ ಸ್ಥಾನ ದೊರೆತಲ್ಲಿ ಸರ್ಕಾರ ಈ ಭಾಗದ ಜನರ ಆಶಯಕ್ಕೆ ಸ್ಪಂದಿಸಿದಂತಾಗುತ್ತದೆ. ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ವೇಗ ದೊರೆಯಲಿದ್ದು, ರೋಣ ಮತಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಮತ್ತಷ್ಟು ಮುನ್ನಡೆಯಲು ಸಹಕಾರಿಯಾಗಲಿದೆ. ಆದ್ದರಿಂದ ಕ್ಷೇತ್ರದ ಜನರ ಆಶಯದಂತೆ ಜಿ.ಎಸ್. ಪಾಟೀಲರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಎಚ್ಕೆ ಪಾಟೀಲ ಡಿಸಿಎಂ, ಜಿಎಸ್ ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

ಲಕ್ಷ್ಮೇಶ್ವರ: ಜಿಲ್ಲೆಯ ರಾಜಕೀಯದಲ್ಲಿ ಎಚ್.ಕೆ. ಪಾಟೀಲ ಹಾಗೂ ಜಿ.ಎಸ್. ಪಾಟೀಲ ಇಬ್ಬರೂ ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಪ್ರಭಾವಿ ನಾಯಕರಾಗಿದ್ದಾರೆ. ಎಚ್.ಕೆ. ಪಾಟೀಲ ಅವರಿಗೆ ಡಿಸಿಎಂ, ಜಿ.ಎಸ್‌. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಆನ೦ದಸ್ವಾಮಿ ಗಡ್ಡದೇವರಮಠ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಈ ನಾಯಕರ ಕೊಡುಗೆ ಅಪಾರ. ಸರ್ಕಾರದ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅವರ ಅನುಭವ ಮತ್ತು ಮಾರ್ಗದರ್ಶನ ಅಗತ್ಯ. ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅದೇ ರೀತಿ ಸಾವಿರ ಕೆರೆಗಳ ಸರದಾರ ಎ೦ದೇ ಖ್ಯಾತಿ ಪಡೆದಿರುವ ಜಿ.ಎಸ್. ಪಾಟೀಲರು ಸಹ ದೀರ್ಘಕಾಲದಿಂದ ಜನಸೇವೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಘಟನೆಗೆ ದುಡಿದಿದ್ದಾರೆ. ಅವರ ಕುಟು೦ಬದ ಸೇವೆ ಮತ್ತು ಪ್ರಭಾವ ಗದಗ ಜಿಲ್ಲೆಯಷ್ಟೇ ಅಲ್ಲದೆ ಹಾವೇರಿ, ಧಾರವಾಡ ಹಾಗೂ ಬಾಗಲಕೋಟೆ ಭಾಗಗಳಲ್ಲಿಯೂ ಇದೆ. ಹೀಗಾಗಿ, ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೂ ಸಹಕಾರಿಯಾಗಲಿದೆ. ಆದ್ದರಿಂದ ಈ ಬಾರಿ ಎಚ್.ಕೆ. ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಿ, ಉತ್ತರ ಕರ್ನಾಟಕಕ್ಕೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಬೇಕು ಎಂದಿದ್ದಾರೆ.