ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಂಡಳ ಅಧ್ಯಕ್ಷ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರು ಎರಡನೇ ಕಾರ್ತಿಕ ಸೋಮವಾರ ಪ್ರಯುಕ್ತ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ಹನೂರು

ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಂಡಳ ಅಧ್ಯಕ್ಷ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರು ಎರಡನೇ ಕಾರ್ತಿಕ ಸೋಮವಾರ ಪ್ರಯುಕ್ತ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.

ಬೆಟ್ಟಕ್ಕೆ ಆಗಮಿಸಿದ ಅವರನ್ನು ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರು ಪೂರ್ಣಕುಂಭ ಮೇಳದೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರು ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸ್ವಾಗತಿಸಿದರು.

ಬಳಿಕ ಗರ್ಭಗುಡಿಗೆ ತೆರಳಿದ ಜಿ.ಟಿ. ದೇವೇಗೌಡ ಅವರು ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಭಕ್ತರಿಗೆ ಕಲ್ಪಿಸಲಾಗಿರುವ ಮೂಲಸೌಕರ್ಯಗಳ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರಿಂದ ಮಾಹಿತಿ ಪಡೆದರು. ಭಕ್ತಾದಿಗಳ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜತೆ ಚರ್ಚಿಸಿದರು.

ಭೇಟಿ ವೇಳೆ ಚಾಮೂಲ್ ನಿರ್ದೇಶಕ ಶಾಹುಲ್ ಅಹಮದ್ ಮುಖಂಡರಾದ ಕಾಮಗೆರೆ ರವಿ , ಸಹಕಾರಿ ಕ್ಷೇತ್ರದ ಪ್ರತಿನಿಧಿಗಳು, ಬೆಂಬಲಿಗರು ಹಾಜರಿದ್ದರು.