ಸಾರಾಂಶ
ಮೇ ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ.
ಕನ್ನಡಪ್ರಭ ವಾರ್ತೆ ಪುತ್ತೂರು
ಮುತ್ತು ಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ರು. ಬಜೆಟ್‌ನಲ್ಲಿ ತಯಾರಿಸಲಾದ ‘ಗಬ್ಬರ್ ಸಿಂಗ್’ ತುಳು ಸಿನಿಮಾ ಮೇ ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವಿ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.ಮೇ ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಗಬ್ಬರ್‌ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಇದ್ದರು.