ಸಾರಾಂಶ
ರಾಜ್ಯಾದ್ಯಂತ ಹೃದಾಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸಂದರ್ಭದಲ್ಲಿಯೇ ಇಲ್ಲಿನ ಉಪನ್ಯಾಸಕಿಯೋರ್ವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದು ಜಿಲ್ಲೆಯಾದ್ಯಂತ ತಲ್ಲಣಕ್ಕೆ ಕಾರಣವಾಗಿದೆ.
ಗದಗ: ರಾಜ್ಯಾದ್ಯಂತ ಹೃದಾಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸಂದರ್ಭದಲ್ಲಿಯೇ ಇಲ್ಲಿನ ಉಪನ್ಯಾಸಕಿಯೋರ್ವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದು ಜಿಲ್ಲೆಯಾದ್ಯಂತ ತಲ್ಲಣಕ್ಕೆ ಕಾರಣವಾಗಿದೆ.ನಗರದ ನಿವಾಸಿ ಹಾಗೂ ಸೊರಟೂರು ಗ್ರಾಮದ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕಿ ಪ್ರಭಾ ಕಲ್ಮಠ (49) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ, ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬಸ್ಥರು ಮತ್ತು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಶೈಕ್ಷಣಿಕ ವಲಯ ಮತ್ತು ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.