ಸಾರಾಂಶ
ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.
ಶಿರಹಟ್ಟಿ(ಗದಗ) : ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.
ಬುಧವಾರ ವಿಪರೀತ ಬಿರುಗಾಳಿ ಕಾಣಿಸಿಕೊಂಡಿದ್ದು, ಗಾಳಿಯ ವೇಗಕ್ಕೆ ಬೆಂಕಿ ನಿಯಂತ್ರಣ ಕಷ್ಟವಾಗಿದ್ದರಿಂದ ಅಪಾರ ಪ್ರಮಾಣದ ಅರಣ್ಯ ಸುಟ್ಟು ಕರಕಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಅರಣ್ಯ ಇಲಾಖೆ ಸಂಗಮೇಶ ನೀರಲಗಿ ಹಾಗೂ ಸಿಬ್ಬಂದಿಯ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ರಾತ್ರಿ 9 ಗಂಟೆಯವರೆಗೂ ಮುಂದುವರೆದಿದೆ.