ಸಚಿವ ಜಮೀರ ಅಹಮದ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಆಡಳಿತ ವೈಫಲ್ಯ ಅನುಭವಿಸಿದ್ದು, ಭ್ರಷ್ಟಾಚಾರ, ಸ್ವಜನಪಕ್ಷಪಾತ ತಾಂಡವವಾಡುತ್ತಿದ್ದು, ಎಲ್ಲಾ ಇಲಾಖೆಗಳಲ್ಲೂ ಲಂಚಗುಳಿತನ ಮಿತಿ ಮೀರಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಸೋಮವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.