ಗದಗ-ಬೆಟಗೇರಿ ಕುಡಿವ ನೀರು ಪೂರೈಸುವ ಕೆರೆ ನಿರ್ಮಾಣ ಕಾಮಗಾರಿ 9 ವರ್ಷದಿಂದ ಅರೆಬರೆಗದಗ-ಬೆಟಗೇರಿ ಅವಳಿ ನಗರಕ್ಕೆ ಪ್ರತಿ ಬೇಸಿಗೆಯಲ್ಲಿ ಎದುರಾಗುವ ಕುಡಿವ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2016-17ರಲ್ಲಿಯೇ ಗದಗ ತಾಲೂಕಿನ ಪಾಪನಾಶಿ ಗ್ರಾಮ ವ್ಯಾಪ್ತಿಯ ಜಮೀನುಗಳಲ್ಲಿ ನೀರು ಸಂಗ್ರಹಣೆಗೆ ಕೆರೆ ನಿರ್ಮಾಣಕ್ಕಾಗಿ ಯೋಜನೆ ರೂಪಿಸಿ, ಆಡಳಿತಾತ್ಮಕ ಒಪ್ಪಿಗೆ ನೀಡಿ ಅಗತ್ಯ ಹಣಕಾಸು ಬಿಡುಗಡೆಯಾಗಿದ್ದರೂ ಇದುವರೆಗೂ ಕೆರೆ ನಿರ್ಮಾಣ ಕಾಮಗಾರಿಯೇ ಪ್ರಾರಂಭವಾಗಿಲ್ಲ.