ಸಾರ್ವಜನಿಕರ ಒತ್ತಡಕ್ಕೆ ಮಣಿದ ಪಾಲಿಕೆಯುಜಿಡಿ ಬಳಕೆದಾರರ ಶುಲ್ಕ (ಯುಜಿಡಿ ಯೂಜರ್ಸ್ ಚಾರ್ಜ್), ಹಾಗೂ ಘನತ್ಯಾಜ್ಯ ನಿರ್ವಹಣೆ ಮೇಲಿನ ಉಪಕರ (ಸೆಸ್) ರದ್ದುಗೊಳಿಸಲು ನಿರ್ಧರಿಸಿದೆ. ಜತೆಗೆ ಖಾಲಿ ನಿವೇಶನದ ಮೇಲಿನ ಘನತ್ಯಾಜ್ಯ ಬಳಕೆದಾರರ ಶುಲ್ಕವನ್ನು ಪ್ರತಿ ಚದುರ ಅಡಿಗೆ 50 ಪೈಸೆಯಿಂದ 25 ಪೈಸೆಗೆ ಇಳಿಸಿದೆ. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ.