ಉತ್ತಮ ಆರೋಗ್ಯಕ್ಕೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯ-ತೋಂಟದ ಡಾ. ಸಿದ್ಧರಾಮ ಶ್ರೀಆಧುನಿಕ ದಿನಗಳಲ್ಲಿ ದೈಹಿಕ ಶ್ರಮ ಕ್ಷೀಣಿಸಿ ಮಾನಸಿಕ ಶ್ರಮ ಹೆಚ್ಚಾಗುತ್ತಿದ್ದು, ದೈನಂದಿನ ವೃತ್ತಿಪರ ಜಂಜಾಟಗಳ ಮಧ್ಯೆ ಆರೋಗ್ಯದ ಕಾಳಜಿ ವಹಿಸದೇ ಇರುವುದು ಅಪಾಯಕಾರಿಯಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷದ ತೋಂಟದಾರ್ಯ ಜಾತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.