ರೋಣ ತಾಲೂಕಿನಾದ್ಯಂತ ಸಂಭ್ರಮದ ಗಣೇಶ ವಿಸರ್ಜನೆರೋಣ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳ ಸಾರ್ವಜನಿಕ ಸ್ಥಳ, ದೇವಸ್ಥಾನ ಮತ್ತು ಮನೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗಳನ್ನು ಭಾನುವಾರ ಸಂಜೆ ಆಯಾ ಗ್ರಾಮ, ಪಟ್ಟಣಗಳ ಬಾವಿ, ಕೆರೆ, ಹೊಂಡಗಳಲ್ಲಿ ಸಕಲ ವಾದ್ಯ ಮೇಳ, ಮೆರವಣಿಗೆಯೊಂದಿಗೆ ಸಡಗರ, ಸಂಭ್ರಮ ಮತ್ತು ಭಕ್ತಿಪೂರ್ವಕವಾಗಿ ವಿಸರ್ಜನೆ ಮಾಡಲಾಯಿತು.