ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು-ಹೊಸಮನಿಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯ. ಶಿಕ್ಷಕರು ಮಕ್ಕಳಲ್ಲಿನ ಪರೀಕ್ಷೆಯ ಭಯ ಹೋಗಲಾಡಿಸಬೇಕು ಎಂದು ಡಿಡಿಪಿಐ ಆರ್.ಎಸ್. ಬುರಡಿ ಹೇಳಿದರು. ಸಮೀಪದ ಪು.ಬಡ್ನಿ ಸಿ.ಚ.ಹರದಗಟ್ಟಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಹಾಗೂ ಸೇವಾ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯ ಎಂ.ಬಿ. ಹೊಸಮನಿ ಅವರ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.