ಗದಗ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಣೆಗೆ ತಡೆಸಾಕಷ್ಟು ರಾಜಕೀಯ, ಕಾನೂನಾತ್ಮಕ ತಿರುವುಗಳನ್ನು ಪಡೆದುಕೊಂಡಿದ್ದ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿತ್ತು. ಅಕ್ರಮವಾಗಿ ಚುನಾವಣೆ ನಡೆಸಿ ಕಾಂಗ್ರೆಸ್, ಕಾನೂನು ಸಚಿವರು ಕಾನೂನು ಬಾಹಿರವಾಗಿ ಅಧಿಕಾರ ಹಿಡಿದಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಸಾಕ್ಷಿ ಎನ್ನುವಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲೇಖಿಸಿ ಚುನಾವಣಾಧಿಕಾರಿಗಳೇ ಆಯ್ಕೆ ಘೋಷಣೆಗೆ ತಡೆ ನೀಡಿದ್ದಾರೆ.