ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್: ಜಿಲ್ಲಾ ನ್ಯಾಯಾಧೀಶ ಬಸವರಾಜಸರ್ವೋಚ್ಚ ನ್ಯಾಯಾಲಯ, ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಹೇಳಿದರು.