ಕನ್ನಡದ ಬೆಳವಣಿಗೆಗೆ ತೋಂಟದ ಶ್ರೀಗಳ ಕೊಡುಗೆ ಅಪಾರತೋಂಟದ ಸಿದ್ಧಲಿಂಗ ಶ್ರೀಗಳು ಗೋಕಾಕ ಚಳವಳಿಗೆ ಸಿಂದಗಿಯಲ್ಲಿ ಮುನ್ನುಡಿ ಬರೆಯುವ ಮೂಲಕ ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತ ಗೊಳಿಸುವ ಕೈಂಕರ್ಯಕ್ಕೆ ಮುನ್ನಡಿ ಇಟ್ಟು, ಲಿಂಗಾಯತ ಅಧ್ಯಯನ ಸಂಸ್ಥೆಯ ಮೂಲಕ ಪುಸ್ತಕ ಪ್ರಕಟಣೆಯನ್ನು ಪ್ರಾರಂಭಿಸಿ ಮರೆತು ಹೋಗಬಹುದಾದ ಮಹನೀಯರನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವನ್ನು ಮಾಡಿದ್ದಾರೆ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.