ಬೇಡಿಕೆ ಈಡೇರಿಸಲು ಒತ್ತಾಯ, ರೈತಸಂಘದಿಂದ ರಸ್ತೆ ತಡೆಮುಂಡರಗಿ ತಾಲೂಕಿನಲ್ಲಿ ಅತಿವೃಷ್ಟಿ ಮಳೆಯಿಂದ ಹೆಸರು, ಸೂರ್ಯಕಾಂತಿ, ಮೆಕ್ಕೆಜೋಳ, ಹತ್ತಿ, ಶೇಂಗಾ, ಭತ್ತ, ಉಳ್ಳಾಗಡ್ಡಿ ಹಾಗೂ ಇತರೆ ಬೆಳೆಗಳು ನಾಶವಾಗಿದ್ದು, ಎಲ್ಲ ಬೆಳೆಗಳಿಗೂ ಶೀಘ್ರವೇ ಬೆಳೆ ಪರಿಹಾರ ಕೊಡಬೇಕು ಮತ್ತು ಬೆಳೆ ವಿಮೆ ಮಾಡಿಸಿದ ಎಲ್ಲ ರೈತರಿಗೆ ಬೆಳೆವಿಮೆ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಪಟ್ಟಣದಲ್ಲಿ ರೈತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.