ಮದುವೆಯಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿ, ಯುವತಿ ಆತ್ಮಹತ್ಯೆ47 ವರ್ಷದ ವ್ಯಕ್ತಿಯೋರ್ವ ಮದುವೆಯಾಗುವಂತೆ ಪದೇ ಪದೇ ಪೀಡಿಸುವುದು, ಕಿರುಕುಳ ನೀಡುವುದು, ತಮ್ಮಿಬ್ಬರ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತು 19 ವರ್ಷದ ಯುವತಿ ಇಲ್ಲಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಫಿನಾಯಿಲ್ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.