ಮುಂಡರಗಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜನ್ಮ ದಿನೋತ್ಸವದ ಅಂಗವಾಗಿ ಸೆ. 14ರಂದು ಬೆಳಗ್ಗೆ 11 ಗಂಟೆಗೆ ಮುಂಡರಗಿಯಲ್ಲಿ ಜರುಗಲಿರುವ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಶಿಕ್ಷಕ, ಉಪನ್ಯಾಸರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.