ಅನೈತಿಕ ಚಟುವಟಿಕೆ ನಿಗ್ರಹಕ್ಕೆ ಕ್ರಮ ವಹಿಸಲು ಒತ್ತಾಯಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಅನೈತಿಕ ಚಟುವಟಿಕೆಯ ತಾಣವಾಗಿದ್ದು, ಅವುಗಳ ಬಗ್ಗೆ ಗ್ರಾಪಂ ಕ್ರಮ ಜರುಗಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು.