ರೈತರಿಗೆ ಸಾಲ ಮರುಪಾವತಿ ನೋಟಿಸ್ ನೀಡದಂತೆ ಮನವಿಅತಿವೃಷ್ಟಿಯಿಂದ ರೈತರು ಬೆಳೆದ ಬೆಳೆಗಳು ಹಾಳಾಗಿವೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಕೈಗೆ ಬಾರದೆ ರೈತರು ಪರಿತಪಿಸುವಂತಾಗಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಶೇಂಗಾ, ಈರುಳ್ಳಿ, ಗೋವಿನಜೋಳ, ಮೆಣಸಿನಕಾಯಿ ಬೆಳೆಗಳು ನಾಶವಾಗಿವೆ.