ಏಕಾಗ್ರತೆಯಿಂದ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ-ಉಪನ್ಯಾಸಕ ಶ್ರೀಶೈಲಇಂದಿನ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದ್ದು, ಓದಲು ಕುಳಿತಾಗ ಏಕಾಗ್ರತೆ ಇಲ್ಲದೇ ಓದಿದ್ದು ಅರ್ಥವಾಗುವುದಿಲ್ಲ. ಅರ್ಥವಾಗಿದ್ದು ನೆನಪಿನಲ್ಲಿ ಉಳಿಯುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆ ಹೆಚ್ಚಿಸಿಕೊಂಡು ವ್ಯವಸ್ಥಿತವಾಗಿ ಓದುವ ಮೂಲಕ ನಿಮ್ಮಲ್ಲಿರುವ ಆತ್ಮವಿಶ್ವಾಸವನ್ನು ಸುಧಾರಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಹಾಗೂ ಉಪನ್ಯಾಸಕರಾದ ಶ್ರೀಶೈಲ ಹೇಳಿದರು.