ಜಿಲ್ಲೆಯಲ್ಲಿ 5021 ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಬದಲಾವಣೆ!ಸರ್ಕಾರದ ಸೂಚನೆಯಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್‌ಗಳ ಸಮೀಕ್ಷೆ ಮತ್ತು ಪರಿಶೀಲನೆ ಕೈಗೊಂಡಿತ್ತು. ಈ ಪರಿಶೀಲನೆಯಲ್ಲಿ ಒಟ್ಟಾರೆಯಾಗಿ 9573 ಅನುಮಾನಾಸ್ಪದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್‌ಗಳನ್ನು ಗುರಿಯಾಗಿಸಲಾಗಿತ್ತು. ಇವುಗಳಲ್ಲಿ ಈಗಾಗಲೇ 5021 ಬಿಪಿಎಲ್ ಕಾರ್ಡ್‌ಗಳು ಅನರ್ಹವೆಂದು ದೃಢಪಟ್ಟಿದ್ದು, ಅವುಗಳನ್ನು ಎಪಿಎಲ್ ಪಡಿತರ ಚೀಟಿಗಳಾಗಿ ಬದಲಾವಣೆ ಮಾಡಲಾಗಿದೆ.