ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಅನಿಲ ಬಡಿಗೇರಶಿರಹಟ್ಟಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ತಹಸೀಲ್ದಾರ್ ಅನಿಲ್ ಬಡಿಗೇರ ಭಾಗವಹಿಸಿ ಮಾತನಾಡಿ, ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಹೇಳಿದರು.