ಮುಂಡರಗಿ ತಾಲೂಕಲ್ಲಿ ಕಳ್ಳತನವಾಗಿದ್ದ ಟ್ರ್ಯಾಕ್ಟರ್ ಎಂಜಿನ್‌ಗಳು ಪತ್ತೆಕಲಕೇರಿ, ಬಸಾಪುರಗಳಲ್ಲಿ ರೈತರ ಟ್ರ್ಯಾಕ್ಟರ್‌ಗಳು (ಎಂಜಿನ್, ಟ್ರೇಲರ್) ಕಳ್ಳತನವಾಗಿ ತಾಲೂಕಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಕಳ್ಳತನವಾಗಿದ್ದ ಎಲ್ಲಾ ವಸ್ತುಗಳನ್ನು ಮುಂಡರಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಎಸ್ಪಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.