ಸಂಸ್ಕಾರವಂತ ಯವಕರ ಕೊರತೆ ಸಮಾಜವನ್ನು ಕಾಡುತ್ತಿದೆ- ವಿಪ ಸಭಾಪತಿ ಬಸವರಾಜ ಹೊರಟ್ಟಿಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ, ನೈತಿಕ ಮೌಲ್ಯಗಳು ಅತೀ ಅವಶ್ಯ, ಸಂಸ್ಕಾರವಂತ ಯವಕ, ಯುವತಿಯರ ಕೊರತೆ ನಮ್ಮ ಸಮಾಜವನ್ನು ಬಹುವಾಗಿ ಕಾಡುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬ ಪಾಲಕರು, ಶಿಕ್ಷಕರು ಮಕ್ಕಳಿಗೆ ಪಠ್ಯಗಳ ಬೋಧನೆ ಜತೆಗೆ ನೈತಿಕ ಶಿಕ್ಷಣವನ್ನು ಬೋಧಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.