ದಿಂಗಾಲೇಶ್ವರ ಶ್ರೀಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ದಾಖಲುಕನ್ನಡಪ್ರಭ ವಾರ್ತೆ ಶಿರಹಟ್ಟಿಇತ್ತೀಚಿನ ದಿನಗಳಲ್ಲಿ ಪೂಜ್ಯರ, ರಾಜ್ಯಪಾಲರ, ಗಣ್ಯರ ತೇಜೋವಧೆ ಮಾಡಲು ಹಾಗೂ ದುಡ್ಡಿನ ದುರಾಸೆಗೆ ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸುವ ಸುದ್ದಿ ಹೆಚ್ಚಾಗಿದ್ದು, ಇದೀಗ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳ ಹೆಸರಿನ ಫೇಕ್ ಐಡಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀಗಳ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋ ಹಾಕಿದವರ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.