ಭಕ್ತಿ ಭಾವದೊಂದಿಗೆ ದೇಗುಲಗಳಲ್ಲಿ ವಿಶೇಷ ಪೂಜೆ, ಮೆರವಣಿಗೆಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ವಿವಿಧ ದೇವಸ್ಥಾನಗಳಲ್ಲಿ ಶ್ರದ್ಧಾ ಭಕ್ತಿಯಿಂದ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯ, ಶ್ರೀರಾಮನ ಭಾವಚಿತ್ರ ಮೆರವಣಿಗೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.