ದಲಿತರಿಗೆ ಕೃಷಿ ಭೂಮಿ, ವಸತಿ ಸೌಲಭ್ಯ ಕಲ್ಪಿಸಲು ಆಗ್ರಹಎಸ್.ಸಿ, ಎಸ್.ಟಿ. ಜನಾಂಗ ಹಾಗೂ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ (ದರಖಾಸ್ತು ಮಂಜೂರಾತಿ ಸಕ್ರಮೀಕರಣ) ಕಾಲಮಿತಿಯೊಳಗಾಗಿ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು ಹಾಗೂ ದಲಿತ ಜನಾಂಗಕ್ಕೆ ಕೃಷಿ ಭೂಮಿ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರೋಣ ತಾಲೂಕು ವತಿಯಿಂದ ಶುಕ್ರವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.