• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶೇಷ ಚೇತನ ಮಕ್ಕಳು ದೇವರಿಗೆ ಸಮಾನ-ಶಾಸಕ ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಅರಳು ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಶನಿವಾರ ವಿಶೇಷ ಚೇತನ ಮಕ್ಕಳಿಗೆ ಬೆಂಗಳೂರಿನ ರೈಸ್ ಬಯೋನಿಕ್ಸ್‌ ಸಂಸ್ಥೆಯ ಉಚಿತವಾಗಿ ನೀಡಿದ ಸಾಧನ ಸಲಕರಣೆಗಳನ್ನು ಶಾಸಕ ಡಾ. ಚಂದ್ರು ಲಮಾಣಿ ವಿತರಿಸಿದರು.
ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸಮರ್ಪಕ ಅನುಷ್ಠಾನವಾಗಲಿ
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಬೇಕು ಎಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಸಾಮಾಜಿಕ ಮೌಲ್ಯಗಳೊಂದಿಗೆ ಹೊಸ ಪೀಳಿಗೆ ಸುಧಾರಿಸಬೇಕು- ಬಳಿಗಾರ
ಶಿರಹಟ್ಟಿ ಪಟ್ಟಣದಲ್ಲಿ ಗುರುವಾರ ಸಂಜೆ ಬೀರೇಶ್ವರ ಸೇವಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ-ಬೆಂಗಳೂರ ಇವರ ಸಹಯೋಗದಲ್ಲಿ ನಡೆದ ಕಾರ್ತಿಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶಂಭು ಬಳಿಗಾರ ಉಪನ್ಯಾಸ ನೀಡಿದರು.
ವಿದ್ಯಾರ್ಥಿ ಜೀವನದಲ್ಲಿ ಉನ್ನತ ಗುರಿ ಇರಲಿ-ನಾಗರಾಜ
ಲಕ್ಷ್ಮೇಶ್ವರ ಪಟ್ಟಣದ ಬಿಸಿಎನ್ ವಿದ್ಯಾಸಂಸ್ಥೆಯ ಬಿಸಿಎನ್ ಸಿರಿ ವಿಜ್ಞಾನ, ವಾಣಿಜ್ಯ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಬಿಸಿಎನ್ ವಿದ್ಯಾಸಂಸ್ಥೆಯ ನಿರ್ದೇಶಕ ನಾಗರಾಜ ಕುಲಕರ್ಣಿ ಉದ್ಘಾಟಿಸಿದರು.
ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ-ಬಿ.ಬಿ. ಪಾಟೀಲ
ಗದಗ ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ಕಲಾ ವಿಭಾಗದ ಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಬೆಳೆದು ಬಂದ ಬಗೆ ಕುರಿತು ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದ ಬಿ.ಬಿ.ಪಾಟೀಲ ಉಪನ್ಯಾಸ ನೀಡಿದರು.
ಜಗತ್ತಿನಲ್ಲಿರುವುದು ಐದೇ ದೇವರುಗಳು: ಗಣಪತಿಭಟ್ಟ ಜೋಷಿ
ನರೇಗಲ್ಲದ ದ್ಯಾಮಮ್ಮ ದೇವಿ ದೇವಸ್ಥಾನದ ಪ್ರಾಂಗಣದಲ್ಲಿ ನಡೆದಿರುವ ಶ್ರೀಗ್ರಾಮ ದೇವತಾ ದೇವಸ್ಥಾನದ ಕಳಸಾರೋಹಣದ ಸಭೆಯನ್ನುದ್ದೇಶಿಸಿ ಸೂಡಿಯ ನಿವೃತ್ತ ಪ್ರಾಚಾರ್ಯ ಗಣಪತಿಭಟ್ಟ ಜೋಷಿ ಮಾತನಾಡಿದರು. ಜಗತ್ತಿನಲ್ಲಿ ಇರುವುದು ಐದೇ ದೇವರುಗಳು. ಅವುಗಳನ್ನೇ ವಿವಿಧ ಹೆಸರುಗಳಿಂದ ಕರೆದು ನಾವುಗಳು ಪೂಜೆ ಮಾಡುತ್ತಿದ್ದೇವೆ. ಶಂಕರ, ನಾರಾಯಣ, ರವಿ, ಗಣಪತಿ ಮತ್ತು ದೇವಿ ಎಂಬ ಐದು ದೇವರುಗಳು ವಿವಿಧ ನಾಮಗಳಿಂದ ಪೂಜಿಸಲ್ಪಡುತ್ತೀವೆ ಎಂದರು.
ವಿಶೇಷ ಚೇತನ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ: ಬುರಡಿ
ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ವಿಶೇಷ ಚೇತನ ಮಕ್ಕಳಿಗೆ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಸಾಧನ ಸಲಕರಣೆ ವಿತರಿಸಿದರು.
ನಾಳೆ ಗದುಗಿಗೆ ಮುಖ್ಯಮಂತ್ರಿ ಸಿದ್ದು ಭೇಟಿ: ಪೂರ್ವ ಸಿದ್ಧತಾ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.೧೭ರಂದು ಗದುಗಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರ ಪಾಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತದ ಸಭಾ ಭವನದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗೃಹಲಕ್ಷ್ಮೀ ಯೋಜನೆ ಪ್ರತಿ ಕುಟುಂಬಕ್ಕೂ ತಲುಪಲಿ-ನವಲಗುಂದ
ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು ಸ್ವಾಗತಾರ್ಹ. ಆದರೆ ಈ ಯೋಜನೆ ಈ ವರೆಗೂ ಶೇ. 60ರಷ್ಟು ಕುಟುಂಬಗಳಿಗೆ ಮಾತ್ರ ತಲುಪಿದ್ದು, ಉಳಿದವರಿಗೆ ಮರೀಚಿಕೆಯಾಗಿದೆ. ಕೂಡಲೇ ಅರ್ಹ ಕುಟುಂಬಗಳಿಗೆ ಯೋಜನೆ ಲಾಭ ದೊರೆಯಬೇಕು ಎಂದು ಕರ್ನಾಟಕ ರೈತ ಸಂಘದ ರೋಣ ತಾಲೂಕು ಪ್ರಧಾನ ಕಾರ್ಯದರ್ಶಿ ದೊಡ್ಡಬಸಪ್ಪ ನವಲಗುಂದ ರೋಣದಲ್ಲಿ ಆಗ್ರಹಿಸಿದರು.
ಮತದಾನ ದಿನ ಮತ ಚಲಾಯಿಸಿ ಸುಭದ್ರ ಸರ್ಕಾರ ರಚಿಸಿ
ಗದಗ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ್‌ ಯುನಿಟ್‌ ಹಾಗೂ ವಿವಿ ಪ್ಯಾಟ್‌ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯ ನ್ನು ಸಾರ್ವಜನಿಕರು ವೀಕ್ಷಿಸಿದರು.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved