ನಿಯಮ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸುಗಜೇಂದ್ರಗಡ ಪುರಸಭೆ ಸಭಾ ಭವನದಲ್ಲಿ ಸೋಮವಾರ ಸ್ಥಾಯಿ ಸಮಿತಿ ಚೇರಮನ್ ಕನಕಪ್ಪ ಅರಳಿಗಿಡದ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಭಿವೃದ್ಧಿಪಡಿಸದ ಬಡಾವಣೆಗಳ ಕೆಲ ನಿವೇಶನಗಳ ಉತಾರಗಳನ್ನು ನೀಡಬಾರದು ಎಂಬ ನಿಯಮಗಳನ್ನು ಗಾಳಿಗೆ ತೂರಿ ಲಂಗು, ಲಗಾಮು ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಎಚ್ಚರಿಸಿದರು.