• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಕಾರ್ಖಾನೆ ಎದುರು ಅಣಕು ಶವ ಪ್ರದರ್ಶನ
ಮುಂಡರಗಿ ತಾಲೂಕಿನ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ವ್ಯಾಪ್ತಿಯ ಗಂಗಾಪುರ ವಿಭಾಗದ ಕೊರ್ಲಹಳ್ಳಿ, ಗಂಗಾಪುರ ಹಾಗೂ ಶೀರನಹಳ್ಳಿ ಗ್ರಾಮಗಳ ರೈತರ ಜಮೀನುಗಳಲ್ಲಿ ಕಾರ್ಖಾನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಕಟಾವಿಗೆ ಗ್ಯಾಂಗ್ ಮ್ಯಾನ್ ಗಳನ್ನು ಕಳಿಸುತ್ತಿಲ್ಲ ಎಂದು ಮಂಗಳವಾರ ಕಾರ್ಖಾನೆ ಎದುರಿನಲ್ಲಿ ಅಣಕು ಶವಯಾತ್ರೆ ಮಾಡುವ ಮೂಲಕ ತಕ್ಷಣವೇ ನಿತ್ಯ 250 ಟನ್ ಕಟಾವಿಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದರು.
ಸಾಮಾನ್ಯರು, ಅನುಭಾವಿಗಳ ಜೀವನ ದೃಷ್ಟಿಕೋನಕ್ಕೂ ವ್ಯತ್ಯಾಸವಿದೆ
ಹಿರಿಯರು, ಶರಣರು ಬಹಳಷ್ಟು ಚಿಂತನೆ ನಡೆಸಿದರೂ ನಮ್ಮ ಜೀವನ ಯಾಕ ಕೆಟ್ಟಿದೆ ಅಂದರೆ ನಮ್ಮ ವಿಚಾರಗಳು ಕೆಟ್ಟಿವೆ. ವಿಚಾರ ಕೆಟ್ಟಿದ್ದಕ್ಕ ಜೀವನ ಕೆಟ್ಟಿದೆ, ವಿಚಾರ ಒಳ್ಳೆಯವು ಇದ್ದರೆ ಜೀವನ ಸುಧಾರಿಸುತ್ತವೆ. ಸಾಮಾನ್ಯರ ಜೀವನ ದೃಷ್ಟಿಕೋನಕ್ಕೂ ಒಬ್ಬ ಅನುಭಾವಿ ಜೀವನ ದೃಷ್ಟಿಕೋನ ನೋಡುವುದು ಬಹಳ ವ್ಯತ್ಯಾಸ ಇದೆ, ಈ ನಾಡಿನ ಶರಣ ಪರಂಪರೆಯಲ್ಲಿ ಅಲ್ಲಮ ಪ್ರಭುಗಳು ಬಹಳ ದೊಡ್ಡವರು ಎಂದು ಕೊಪ್ಪಳದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಡಂಬಳದಲ್ಲಿ ನಡೆದ ಸದ್ಭಾವನಾ ಪಾದಯಾತ್ರೆ ಬಳಿಕ ಹೇಳಿದರು.
ಅಕಾಲಿಕ ಮಳೆಗೆ ಹಾಳಾದ ಗೋವಿನ ಜೋಳದ ಬೆಳೆ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆ-ಗಾಳಿಗೆ ಸಮೀಪದ ಬಾಲೆಹೊಸೂರ ಗ್ರಾಮದ ಸಣ್ಣಬಸಪ್ಪ ಅಣ್ಣಿಗೇರಿ ಎಂಬುವವರ ಹೊಲದಲ್ಲಿನ ಗೋವಿನ ಜೋಳದ ಬೆಳೆ ನೆಲಕ್ಕೆ ಬಿದ್ದು ನಾಶವಾಗಿದೆ.ತಾಲೂಕಿನ ರೈತರಿಗೆ ಶಾಪವಾಗಿ ಕಾಡುತ್ತಿದ್ದ ಮಳೆ 3-4 ತಿಂಗಳಿಂದ ಮಾಯವಾಗಿತ್ತು. ಆದರೆ ಮಂಗಳವಾರ ಸಂಜೆ 6 ಗಂಟೆಗೆ ಆರಂಭವಾದ ಮಳೆ-ಗಾಳಿಯು ರಾತ್ರಿ 8 ಗಂಟೆಯವರೆಗೆ ಸುರಿಯುವ ಮೂಲಕ ರೈತರಿಗೆ ಸಂಕಷ್ಟ ಉಂಟು ಮಾಡಿದೆ.
ರೈತರಿಗೆ ತ್ವರಿತ ಸೇವೆ ಕಲ್ಪಿಸಲು‌ ಶ್ರಮಿಸಿದ ಸರ್ವೇ ಅಧಿಕಾರಿಗಳಿಗೆ ತಾಕೀತು
ಅಳತೆ, ವಾಟ್ನಿ, ಪೋಡಿ, ಆಕಾರ ಬಂದು ನಕಲು ಸೇರಿದಂತೆ ಯಾವುದೇ ಸೇವೆಯಾಗಲಿ ತ್ವರಿತಗತಿಯಲ್ಲಿಯೇ ಕಲ್ಪಿಸುವಲ್ಲಿ ಸರ್ವೇ ಇಲಾಖೆ ಪ್ರತಿಯೋರ್ವ ಅಧಿಕಾರಿ, ಸಿಬ್ಬಂದಿಗಳು ಶ್ರಮಿಸಬೇಕು. ಅನಗತ್ಯ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ವೈಶಾಲಿ ಅವರು ರೋಣ ಸರ್ವೇ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬರಗಾಲಕ್ಕಾಗಿ ಅನುದಾನ, ಕೇಂದ್ರದ ವಿಳಂಬ ದ್ರೋಹಕ್ಕೆ ಜನ ಕ್ಷಮಿಸೊಲ್ಲ
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಈಗಾಗಲೇ ಕೇಂದ್ರ ಬರ ಅಧ್ಯಯನ ತಂಡ ಭೇಟಿ ಮಾಡಿ ಹೋಗಿದ್ದರೂ ರಾಜ್ಯದ ರೈತರಿಗೆ ಬರಗಾಲಕ್ಕಾಗಿ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ತೀವ್ರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಈ ವಿಳಂಬ ದ್ರೋಹವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಗದಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಒಂಟಿ ಸೊಸೆಗೆ ಸೀರೆ ಉಡಿಸುವ ವದಂತಿ
ಅಣ್ಣ ಅಥವಾ ತಮ್ಮನಿಗೆ ಒಬ್ಬಳೇ ಮಗಳಿದ್ದರೆ ಅವರ ಸಹೋದರಿ (ಮಕ್ಕಳಿಗೆ ಅತ್ತೆ) ಸೊಸೆಗೆ ಸೀರೆ ಉಡಿಸಬೇಕು. ಇಲ್ಲವಾದರೆ ಕೇಡು ಆಗಲಿದೆ ಎನ್ನುವ ವದಂತಿ ಶಿರಹಟ್ಟಿ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹಬ್ಬಿದ್ದು, ಬಟ್ಟೆ ಅಂಗಡಿಗಳಲ್ಲಿ ಭರ್ಜರಿ ಸೀರೆ ವ್ಯಾಪಾರ ನಡೆದಿದೆ.
ಅನುದಾನಿತ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ
ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಹೇಳಿದರು.
ಸಂವಿಧಾನವೇ ನಿಜವಾದ ಶಕ್ತಿ, ಸಮರ್ಥವಾಗಿ ಬಳಸುವ ವ್ಯಕ್ತಿಗಳು ನೀವಾಗಬೇಕು
ಗದಗ ನಗರದ ಎ.ಪಿ.ಎಂ.ಸಿ. ಪ್ರಾಂಗಣದ ವಿವೇಕಾನಂದ ಸಭಾ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೆ.ಎಚ್.ಪಾಟೀಲ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಸಶಕ್ತಿಕರಣ ಕಾರ್ಯಕ್ರಮವನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ ಉದ್ಘಾಟಿಸಿದರು.
ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಗುತ್ತಿಗೆದಾರರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೋಟಿಗಟ್ಟಲೆ ಬಿಲ್ ಪಡೆದು ಪಾರಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ದ ಇಲಾಖೆ ವತಿಯಿಂದಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಎಂದು ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜರುಗಿದ ಟಾಸ್ಕಪೋರ್ಸ್ ಕಮಿಟಿ ಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಸೂಚಿಸಿದರು.
ಯುವ ಸಂಸತ್‌ನಲ್ಲಿ ಪಾಲ್ಗೊಂಡವರಲ್ಲಿ ನಾಯಕತ್ವ ಗುಣ ಮೂಡುತ್ತದೆ
ಜಿಲ್ಲಾಡಳಿತ ಭವನದ ಜಿಪಂ ಸಭಾಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಸಹಯೋಗದೊಂದಿಗೆ ಪ್ರೌಢಶಾಲಾ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸಮಾರೋಪ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಉದ್ಘಾಟಿಸಿದರು.
  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 545
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved