ಮುಂಡರಗಿ ಅಂಬೇಡ್ಕರ್ ವಸತಿ ಶಾಲೆ ಕಾಯಂ ಲಕ್ಷ್ಮೇಶ್ವರಕ್ಕೆ ಸ್ಥಳಾಂತರವಿಲ್ಲ- ಡಾ. ಚಂದ್ರು ಲಮಾಣಿಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯನ್ನು ಲಕ್ಷ್ಮೇಶ್ವರ ಪಟ್ಟಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿದ್ದು, ಈ ಶಾಲೆಯನ್ನು ಯಾವುದೇ ಕಾರಣಕ್ಕೂ ಕಾಯಂ ಸ್ಥಳಾಂತರ ಮಾಡುವುದಿಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಸ್ಪಷ್ಟ ಪಡಿಸಿದ್ದಾರೆ.