ಉಕ್ಕಿ ಹರಿದ ಬೆಣ್ಣೆಹಳ್ಳ; ಯಾವಗಲ್ಲ ಬಳಿ ಸೇತುವೆ ಜಲಾವೃತಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಣ್ಣೆಹಳ್ಳ ತುಂಬಿ ಹರಿದ ಪರಿಣಾಮ ಗುರುವಾರ ಬೆಳಗ್ಗೆಯಿಂದ ಸಂಜೆವರೆಗೂ ತಾಲೂಕಿನ ಯಾವಗಲ್ಲ ಸಮೀಪ ಸೇತುವೆ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಪ್ರಯಾಣಿಕರು, ವಾಹನ ಸವಾರರು, ಜನತೆ ತೀವ್ರ ತೊಂದರೆ ಎದುರಿಸುವಂತಾಯಿತು.