ಕೈಗಾರಿಕೋದ್ಯಮಿಗಳಿಗೆ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ನೀಡಲಿ-ಸಂಸದ ಬೊಮ್ಮಾಯಿಸಣ್ಣ ಕೈಗಾರಿಕೆ ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸಾಲ ಒದಗಿಸುವಲ್ಲಿ ಸೂಕ್ತ ಕ್ರಮ ವಹಿಸಿ ಮಾರ್ಗದರ್ಶನ ನೀಡಬೇಕು. ಕೈಗಾರಿಕೆ ಕ್ಷೇತ್ರದಲ್ಲಿ ಸಮರ್ಪಕ ಪ್ರಮಾಣದಲ್ಲಿ ಸಾಲ ನೀಡಿಕೆಯಾದರೆ ಇದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಯಾಗಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಹ ಲಭಿಸಲಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.