ಗೊಜನೂರ ಗುಡ್ಡದ ಮಣ್ಣು ನೀಡದ ಅಧಿಕಾರಿಗಳು, ರಸ್ತೆ ಕಾಮಗಾರಿಗೆ ತೊಂದರೆಲಕ್ಷ್ಮೇಶ್ವರ ಸಮೀಪದ ಗೊಜನೂರ ಗುಡ್ಡದ ಮಣ್ಣನ್ನು ರೈತ ಸಂಪರ್ಕ ರಸ್ತೆಗಳ ದುರಸ್ತಿಗೆ ತೆಗೆದುಕೊಂಡು ಹೋಗಲು ಕಂದಾಯ ಅಧಿಕಾರಿಗಳು ಬಿಡುತ್ತಿಲ್ಲ. ಗೊಜನೂರ ಗುಡ್ಡವು ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಇದ್ದು ಅದರಲ್ಲಿನ ಮಣ್ಣು ತೆಗೆಯಲು ಅಧಿಕಾರಿಗಳು ಬಿಡುತ್ತಿಲ್ಲ, ಇದು ರಸ್ತೆ ಕಾಮಗಾರಿ ಮಾಡುವಲ್ಲಿ ತೊಂದರೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.