ಕನ್ನಡಪ್ರಭ ವಾರ್ತೆ ಬಾಗಲಕೋಟೆಹುಬ್ಬಳ್ಳಿಯಲ್ಲಿ ನಡೆದ ರೈತರ ಪ್ರತಿಭಟನೆ ವೇಳೆ ಶಶಿಕಾಂತ ಗುರೂಜಿಯವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಬಗ್ಗೆ ಹಾಗೂ ಅವರ ಕುಟುಂಬದವರ ಬಗ್ಗೆ ಅತ್ಯಂತ ಅವಹೇಳನಕಾರಿ ಹಾಗೂ ಅಸಭ್ಯವಾಗಿ ಮಾತನಾಡಿರುವುದನ್ನು ಸಂಸದ ಪಿ.ಸಿ.ಗದ್ದಿಗೌಡರ ತೀವ್ರವಾಗಿ ಖಂಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹುಬ್ಬಳ್ಳಿಯಲ್ಲಿ ನಡೆದ ರೈತರ ಪ್ರತಿಭಟನೆ ವೇಳೆ ಶಶಿಕಾಂತ ಗುರೂಜಿಯವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಬಗ್ಗೆ ಹಾಗೂ ಅವರ ಕುಟುಂಬದವರ ಬಗ್ಗೆ ಅತ್ಯಂತ ಅವಹೇಳನಕಾರಿ ಹಾಗೂ ಅಸಭ್ಯವಾಗಿ ಮಾತನಾಡಿರುವುದನ್ನು ಸಂಸದ ಪಿ.ಸಿ.ಗದ್ದಿಗೌಡರ ತೀವ್ರವಾಗಿ ಖಂಡಿಸಿದ್ದಾರೆ.

ಗುರುವಿನ ಸ್ಥಾನದಲ್ಲಿರುವ ವ್ಯಕ್ತಿ ರೈತರ ಪರವಾಗಿ ಮಾತನಾಡುವಾಗ ಸಂಯಮ ಕಳೆದುಕೊಳ್ಳಬಾರದು. ಇಂತಹ ಅಸಭ್ಯ ಪದಗಳು ಅವರ ಬಾಯಿಂದ ಬರಬಾರದಿತ್ತು ಎಂದಿರುವ ಅವರು, ರೈತರ ಸಮಸ್ಯೆಗಳು ಮತ್ತು ಅವರ ಭಾವನೆಗಳಿಗೆ ಸ್ಪಂದಿಸಿ, ಸರ್ಕಾರದಿಂದ ಸೌಲಭ್ಯಗಳನ್ನು ಕೊಡಿಸುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ವತಃ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಹ್ವಾನ ಸಹ ನೀಡಿದ್ದಾರೆ. ಆದರೂ ಇಂತಹ ಅವಹೇಳನಕಾರಿ ಮಾತುಗಳನ್ನು ಆಡಿರುವುದು ಯಾರಿಗೂ ಶೋಭೆ ತರುವುದಿಲ್ಲ. ಆದ್ದರಿಂದ ಶಶಿಕಾಂತ ಗುರೂಜಿಯವರು ಕೂಡಲೇ ಸಚಿವರಿಗೆ ಹಾಗೂ ಅವರ ಕುಟುಂಬಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.