ಬೈಂದೂರಿನಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವದ ಪ್ರಯುಕ್ತ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ, ದಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನವನ್ನು ನೆಲ್ಯಾಡಿ ಬಯಲು ಮಂದಿರದಲ್ಲಿ ಆಯೋಜಿಸಲಾಯಿತು.

ಬೈಂದೂರು: ಇಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವದ ಪ್ರಯುಕ್ತ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ, ದಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನವನ್ನು ನೆಲ್ಯಾಡಿ ಬಯಲು ಮಂದಿರದಲ್ಲಿ ಆಯೋಜಿಸಲಾಯಿತು.

ಈ ಪ್ರದರ್ಶನವನ್ನು ಗೋಪೂಜೆಯ ಮೂಲಕ ಉದ್ಘಾಟಿಸಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕಾಲದ ಅವಶ್ಯಕತೆಯಂತೆ ಹೈನುಗಾರಿಕೆಯನ್ನು ಮಾರ್ಪಾಡು ಮಾಡಿಕೊಂಡರೇ ಲಾಭದಾಯಕವಾಗಿಸಲು ಸಾಧ್ಯವಾಗುತ್ತದೆ. ಬೈಂದೂರು ಜನರ ಹೈನುಗಾರಿಕರಿಗೆ ಉತ್ತೇಜನ ನೀಡುವುದಕ್ಕಾಗಿಯೇ ಈ ಹೆಣ್ಣು ಕರುಗಳ ಪ್ರದರ್ಶನ ಎರ್ಪಡಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯಿಂದ ಆರ್ಥಿಕ ಪ್ರಗತಿ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ ಮಧ್ವರಾಜ್, ದಕ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಂ. ಸುಧಾಕರ ಶೆಟ್ಟಿ, ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ, ಮಮತಾ ಆರ್. ಶೆಟ್ಟಿ, ಡಿ. ವಿವೇಕ್, ವ್ಯವಸ್ಥಾಪಕ ಡಾ.ರವಿರಾಜ ಉಡುಪ, ಸಮೃದ ಬೈಂದೂರು ಅಧ್ಯಕ್ಷ ಸುರೇಶ ಶೆಟ್ಟಿ ಉಪ್ಪುಂದ, ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಬೈಂದೂರು ಉತ್ಸವದ ಸಂಚಾಲಕ ಶ್ರೀಗಣೇಶ ಉಪ್ಪುಂದ, ಉಪ ವ್ಯವಸ್ಥಾಪಕ ಶಂಕರ ನಾಯ್ಕ ವಿಸ್ತರಣಾಧಿಕಾರಿ ವಾಸುದೇವ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಂದಿನಿ ಉಪ ವ್ಯವಸ್ಥಾಪಕ ಚಂದ್ರಶೇಖರ ಭಟ್ ಜಾನುವಾರುಗಳನ್ನು ಸಾಕುವ ಬಗ್ಗೆ, ಹೈನುಗಾರರಿಗೆ ಮಾಹಿತಿ ನೀಡಿದರು ಹಾಗೂ ಆಯ್ಕೆಯಾದ ಕರುಗಳಿಗೆ ಬಹುಮಾನ ವಿತರಿಸಲಾಯಿತು.