ಗಾಳಿಬೀಡು ತಂಬಾಕು ಮುಕ್ತ ಗ್ರಾಮ ಘೋಷಣೆ: ಗ್ರಾ.ಪಂ. ಸಭೆ ಚರ್ಚೆ

| Published : Aug 14 2025, 12:00 AM IST

ಗಾಳಿಬೀಡು ತಂಬಾಕು ಮುಕ್ತ ಗ್ರಾಮ ಘೋಷಣೆ: ಗ್ರಾ.ಪಂ. ಸಭೆ ಚರ್ಚೆ
Share this Article
  • FB
  • TW
  • Linkdin
  • Email

ಸಾರಾಂಶ

ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಚರ್ಚಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಗಾಳಿಬೀಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಗೆ ಬರುವ ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್, ತಂಬಾಕು ಮುಕ್ತ ಗ್ರಾಮ ಘೋಷಣೆ, ಗೃಹ ಆರೋಗ್ಯ ಯೋಜನೆ, ಕುಷ್ಠರೋಗ ಪತ್ತೆ ಅಭಿಯಾನ, ಕ್ಷಯರೋಗ ಮುಕ್ತ, ಮತ್ತು ಡೆಂಘೀ ನಿಯಂತ್ರಣ ಕುರಿತು ಮಾಹಿತಿ ನೀಡಿ ಪಂಚಾಯತಿ ಸಹಕಾರ ನೀಡುವಂತೆ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಾಲಾಕ್ಷ, ಸ್ತನ್ಯಪಾನ ಸಪ್ತಾಹ ಕುರಿತು ತಾಯಂದಿರು ಶಿಶುವಿಗೆ ಎದೆ ಹಾಲು ನೀಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ತಂಬಾಕು ಕೋಶದ ಪುನೀತ, ಮಂಜುನಾಥ್, ತಂಬಾಕು ಮುಕ್ತ ಗ್ರಾಮದ ಮಾರ್ಗಸೂಚಿ ಕುರಿತು ವಿವರಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಶೇಖರ ಮತ್ತು ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ರವರು ಹಾಜರಿದ್ದರು.