ಸಾರಾಂಶ
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿ ಇರುವ ಸಾರ್ವಜನಿಕ ಸಮುದಾಯ ಭವನದಲ್ಲಿ ಶ್ರೀ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ೬೭ನೇ ವರ್ಷದ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವವು ಶಾಸಕ ಎಚ್.ಡಿ.ರೇವಣ್ಣ ಉಪಸ್ಥಿತಿಯಲ್ಲಿ ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ ಜರುಗಿತು.ಶನಿವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ಸ್ವಾಮಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ ನೆರವೇರಿಸಿ, ಸಂಪ್ರದಾಯದ ಆಚರಣೆಯಂತೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಶ್ರೀ ಸ್ವಾಮಿಯ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಿ, ಹೇಮಾವತಿ ನದಿಯಲ್ಲಿ ತೆಪ್ಪೋತ್ಸವ ನಡೆಸಿ, ಶ್ರೀಸ್ವಾಮಿಯ ಮೂರ್ತಿಯನ್ನು ವಿಸರ್ಜಿಸಲಾಯಿತು.ಅರ್ಚಕ ಶ್ರೀಷಾಚಾರ್ ಹಾಗೂ ರಮೇಶ್ ಐತಾಳ್ ಪೂಜಾ ಕೈಂಕರ್ಯ ನೆರವೇರಿಸಿದರು. ಪೂಜಾ ಮಹೋತ್ಸವದಲ್ಲಿ ಐಪಿಎಸ್ ಅಧಿಕಾರಿ ಶಾಲೂ, ಶ್ರೀ ಮಹಾಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಟಿ.ಶಿವಕುಮಾರ್, ಅಧ್ಯಕ್ಷ ಹಾಗೂ ಪುರಸಭಾಧ್ಯಕ್ಷ ಕೆ.ಶ್ರೀಧರ್, ಕಾರ್ಯಾಧ್ಯಕ್ಷ ಎಚ್.ಎಸ್.ಪುಟ್ಟಸ್ವಾಮಪ್ಪ, ಪಿಎಸ್ಸೈ ಅಭಿಜಿತ್ ಹಾಗೂ ರಂಗಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷರಾದ ಎಚ್.ಎಸ್.ಸುದರ್ಶನ್ ಹಾಗೂ ಜಿ.ಕೆ.ಸುಧಾನಳಿನಿ, ಪುರಸಭಾ ಸದಸ್ಯ ಎ.ಜಗನ್ನಾಥ್, ಪುರಸಭೆ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ಉದ್ಯಮಿ ದೊಡ್ಡಮಲ್ಲಣ್ಣ, ರವಿಕುಮಾರ್, ಎಸ್.ಗೋಕುಲ್, ತಾ. ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್ ಕುಮಾರ್, ವೈ.ವಿ.ಚಂದ್ರಶೇಖರ್, ಈಶ್ವರ್, ಶಂಕರನಾರಾಯಣ ಐತಾಳ್, ಇತರರು ಭಾಗವಹಿಸಿದ್ದರು.