ಸಾರಾಂಶ
ತುರುವೇಕೆರೆ ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಮೂವರ ಮನೆಗೆ ಧಾವಿಸಿದ ಶಾಸಕ ಎಂ.ಟಿ.ಕೃಷ್ಣಪ್ಪನವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರಲ್ಲದೇ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ಕನ್ನಡಪ್ರಭವಾರ್ತೆ ತುರುವೇಕೆರೆ
ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಮೂವರ ಮನೆಗೆ ಧಾವಿಸಿದ ಶಾಸಕ ಎಂ.ಟಿ.ಕೃಷ್ಣಪ್ಪನವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರಲ್ಲದೇ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ತಾಲೂಕಿನ ರಂಗನಹಟ್ಟಿಯಲ್ಲಿನ ಮೃತರ ಮನೆಗಳಿಗೆ ಭೇಟಿ ನೀಡಿದ ಶಾಸಕ ಎಂ.ಟಿ.ಕೃಷ್ಣಪ್ಪ ಮೃತ ದಯಾನಂದ್ ರವರ ಮನೆಗೆ ಭೇಟಿ ನೀಡಿ ವೈಯಕ್ತಿಕವಾಗಿ ೨೫ ಸಾವಿರ ರು. ಧನ ಸಹಾಯ ಮಾಡಿದರು. ಅಲ್ಲದೇ ದಯಾನಂದ್ ರ ಪತ್ನಿ ಪದವೀಧರಳಾಗಿದ್ದು ಆಕೆಗೆ ಗುತ್ತಿಗೆ ಆಧಾರದಲ್ಲಿ ಹೇಮಾವತಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದರು. ನೀರಿನಲ್ಲಿ ಮುಳುಗಿ ಮೃತಪಟ್ಟ ಅದೇ ಗ್ರಾಮದ ತಂದೆ ಮತ್ತು ಮಗ ಆಗಿರುವ ರೇವಣ್ಣ ಮತ್ತು ಶರತ್ ರವರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಅಲ್ಲದೇ ವೈಯಕ್ತಿಕವಾಗಿ ೨೫ ಸಾವಿರ ರು.ಗಳ ಧನಸಹಾಯ ಮಾಡಿದರು. ಅಲ್ಲದೇ ಎರಡೂ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು. ಈ ಸಂಧರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಸಾದರಹಳ್ಳಿ ದೊಡ್ಡೇಗೌಡ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಲೀಲಾವತಿ ಗಿಡ್ಡಯ್ಯ, ಅಮ್ಮಸಂದ್ರ ಸಿದ್ದೇಗೌಡ, ಮಾರಸಂದ್ರ ಯೋಗೀಶ್ ಮತ್ತು ಗ್ರಾಮ ಪಂಚಾಯ್ತಿ ಸದಸ್ಯ ರಾಮಚಂದ್ರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.