ಸಾರಾಂಶ
ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪೋಸ್ಟರ್ ಮೇಕಿಂಗ್ ಸ್ಫರ್ಧೆಯಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದುಕೊಂಡಿದೆ.ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಜೇತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರಾದ ದಿಲೀಪ್ ಕುಮಾರ್ ಎಚ್.ಕೆ. ಮತ್ತು ಕಾವ್ಯ ಸಿ.ಪಿ. ಅವರ ಮಾರ್ಗದರ್ಶನ ಪಡೆದುಕೊಂಡಿದ್ದರು.
ಕನ್ನಡಪ್ರಭ ವಾರ್ತೆ ಹಾಸನ
ನಗರದ ಎಂ.ಜಿ. ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪೋಸ್ಟರ್ ಮೇಕಿಂಗ್ ಸ್ಫರ್ಧೆಯಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದುಕೊಂಡಿದೆ.ಎಂ.ಜಿ. ರಸ್ತೆಯ ಮಹಿಳಾ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗಂಧದ ಕೋಠಿ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಾದ ಗೋದರ್ಶಿನಿ ಎಚ್.ಆರ್ ಮತ್ತು ಅಮೃತ ಎನ್.ಎಸ್. ತಂಡ (ಪ್ರಥಮ) ಹಾಗೂ ಪ್ರನು ಜೆ.ಆರ್ ಮತ್ತು ಸುಚಿತ್ರ ಎ.ವಿ. ತಂಡ (ದ್ವಿತೀಯ) ಬಹುಮಾನ ಪಡೆದುಕೊಂಡಿದೆ.
ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಜೇತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರಾದ ದಿಲೀಪ್ ಕುಮಾರ್ ಎಚ್.ಕೆ. ಮತ್ತು ಕಾವ್ಯ ಸಿ.ಪಿ. ಅವರ ಮಾರ್ಗದರ್ಶನ ಪಡೆದುಕೊಂಡಿದ್ದರು.