23 ರಂದು ವಿವಿಧ ಕಾಮಗಾರಿಗಳಿಗೆ ಸಿಎಂ, ಡಿಸಿಎಂ ಚಾಲನೆ

| Published : May 09 2025, 12:33 AM IST

23 ರಂದು ವಿವಿಧ ಕಾಮಗಾರಿಗಳಿಗೆ ಸಿಎಂ, ಡಿಸಿಎಂ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬೇಕಾಗುವ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಲಾಗಿದೆ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಕಳೆದ 15 ವರ್ಷಗಳಿಂದ ಅಭಿವೃದ್ಧಿ ಕಾಣದ ಗಂಧನಹಳ್ಳಿ ಗ್ರಾಮ ಸೇರಿದಂತೆ ಹಲವಾರು ಗ್ರಾಮಗಳಿಗೆ ವಿವಿಧ ಇಲಾಖೆಗಳಿಂದ ಸಾಕಷ್ಟು ಅನುದಾನ ಮಂಜೂರು ಮಾಡಿಸಲಾಗಿದ್ದು, ಮೇ 23 ರಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಡಿ. ರವಿಶಂಕರ್ ತಿಳಿಸಿದರು.

ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ 2.10 ಕೋಟಿ ರೂ. ಗ್ರಾಮ ಪರಿಮಿತಿ ರಸ್ತೆಯ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆ.ಆರ್. ನಗರದ ಪುರಸಭೆ ಬಯಲು ರಂಗ ಮಂದಿರದಲ್ಲಿ ಮುಖ್ಯಮಂತ್ರಿ ಸೇರಿದಂತೆ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದು, 400 ಕೋಟಿ ರೂ. ಅಧಿಕ ಅಭಿವೃದ್ದಿ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲಿದ್ದಾರೆ ಎಂದರು.

ಅಭಿವೃದ್ದಿಯಲ್ಲಿ ಹಿಂದುಳಿದ ಗ್ರಾಮಗಳನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬೇಕಾಗುವ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಲಾಗಿದೆಯ ಕ್ಷೇತ್ರಕ್ಕೆ 5 ಕರ್ನಾಟಕ ಪಬ್ಲಿಕ್ ಶಾಲೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಗಂಧನಹಳ್ಳಿ ಗ್ರಾಮದಲ್ಲೂ ಶಾಲೆ ಆರಂಭಿಸಲಾಗುತ್ತದೆ ಎಂದು ಅವರು ಹೇಳಿದರು.

ಗಂಧನಹಳ್ಳಿ ಗ್ರಾಮದ ಸಮಗ್ರ ಅಭಿವೃದ್ದಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಹಂತ ಹಂತವಾಗಿ ಅನುದಾನ ತಂದು ಕಾಮಗಾರಿಗಳನ್ನು ಮಾಡಲಾಗುತ್ತದೆ. ಕಪ್ಪಡಿ ಕ್ಷೇತ್ರದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು 25 ಕೋಟಿ ಮತ್ತು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ತಾಲೂಕು ಆಸ್ಪತ್ರೆಯಾಗಿ ಪರಿವರ್ತನೆ ಮಾಡಿಸಲಾಗಿದ್ದು, ಆ ಭಾಗದ ಜನತೆಗೆ ಸಾಕಷ್ಟು ಅನುದಾನವಾಗಲಿದೆ ಎಂದರು.

ಚುಂಚನಕಟ್ಟೆಯ ಶ್ರೀ ರಾಮ ಸಕ್ಕರೆ ಕಾರ್ಖಾನೆ ಪುನರ್ ಆರಂಭವಾಗಲಿದ್ದು, ಈಗಾಗಲೇ ಗುತ್ತಿಗೆ ಕರಾರನನ್ನು ಮಾಡಿಸಿಕೊಂಡಿರುವ ನಿರಾಣಿ ಶುಗರ್ಸ್ ನವರು ರೈತರಿಗೆ ಭಿತ್ತನೆ ಕಬ್ಬು ಮತ್ತು ರಸಗೊಬ್ಬರವನ್ನು ವಿತರಣೆ ಮಾಡುವುದಾಗಿ ಭರವಸೆ ನೀಡಿದ್ದು, ಕಾರ್ಖಾನೆ ಆರಂಭಕ್ಕೂ ಮುನ್ನ ಕಬ್ಬು ಬೆಳೆಗಾರರ ಸಭೆ ನಡೆಸಲಿದ್ದಾರೆ. ಕಾರ್ಖಾನೆ ಆರಂಭವಾಗುವುದರಿಂದ ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಆ ನಂತರ ಬಾಲೂರು ಗ್ರಾಮದಲ್ಲಿ 15 ಲಕ್ಷ ರೂ. ಸಿಸಿ ರಸ್ತೆಗೆ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷೆ ಮಹದೇವಿ ಬಲರಾಮು, ಸದಸ್ಯರಾದ ಸುಲೋಜನಾ, ಲೋಕೇಶ್, ಸಣ್ಣದೊಡ್ಡೇಗೌಡ, ಮಂಗಳಮ್ಮ, ಸತೀಶ್, ಚಿಕ್ಕವಡ್ಡರಗುಡಿ ವಿಎಸ್‌ಎಸ್ ಎನ್ ಮಾಜಿ ಅಧ್ಯಕ್ಷ ಜಿ.ಆರ್. ಕೃಷ್ಣೇಗೌಡ, ತಾಪಂ ಮಾಜಿ ಸದಸ್ಯ ಜಿ.ಎಸ್. ಮಂಜುನಾಥ್, ಕಾಂಗ್ರೆಸ್ ವಕ್ತಾರ ಸೈಯದ್‌ ಜಾಬೀರ್, ಮುಖಂಡರಾದ ಜಿ.ಎಸ್. ವೆಂಕಟೇಶ್, ಜಿ.ಎನ್. ರಘು, ಜಿ.ಆರ್. ದೇವೇಂದ್ರ, ಜಿ.ಎಂ. ಹೇಮಂತ್, ಎಸ್. ರಾಮು, ನವೀನ್‌ ಕುಮಾರ್, ಕೃಷ್ಣಪ್ರಸಾದ್, ಜಿ.ಆರ್. ಮಹದೇವ್, ಹಂಪಾಪುರ ನಾಗೇಶ್, ಗಜೇಂದ್ರ, ಆದರ್ಶ ಮೊದಲಾದವರು ಇದ್ದರು.

-----------------

eom/mys/shekar/