ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಸದ್ಭಾವನಾ ನಡಿಗೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗಾಂಧಿ ಜಯಂತಿ ಅಂಗವಾಗಿ ಬುಧವಾರ ಆಯೋಜಿಸಿದ್ದ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಧಾನಸೌಧ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ನೇರಪ್ರಸಾರ ಮಾಡಲಾಯಿತು. ಶಾಸಕರು ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಗಾಂಧೀಜಿ ಅವರು ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಿ ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಯಶ್ವಸಿಯಾಗಿದ್ದರು. ಈ ದೇಶದ ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯದ ಮಾರ್ಗದಲ್ಲಿ ನಡೆಯಬೇಕು. ಅಲ್ಲದೇ, ಸ್ವಚ್ಛತಾ ಕಾಯಕದಲ್ಲಿ ತೊಡಗಿಕೊಳ್ಳಬೇಕು ಎಂದರು.ಸತ್ಯವನ್ನು ಎತ್ತಿ ಹಿಡಿಯುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಪರಿಪಾಲಿಸುವಲ್ಲಿ ಸದಾ ಮಗ್ನರಾಗಿದ್ದ ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ನಾವೆಲ್ಲ ಪಾಲಿಸಬೇಕು ಎಂದರು.
ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾಲಾರ್ಪಣೆ ಮಾಡಿ ನಂತರ ನೂರಾರು ಕಾರ್ಯಕರ್ತರೊಂದಿಗೆ ಘೋಷಣೆ ಕೂಗುತ್ತಾ ಸದ್ಭಾವನಾ ನಡಿಗೆ ಮೂಲಕ ಸಾಗಿದರು.ಈ ವೇಳೆ ಪುರಸಭೆ ಸದಸ್ಯರಾದ ಎಂ.ಆರ್.ರಾಜಶೇಖರ್, ಎಂ.ಎನ್.ಶಿವಸ್ವಾಮಿ, ಪ್ರಮೀಳಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಶಾಸಕರ ಪುತ್ರ ಯುವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ಮಾಜಿ ಅಧ್ಯಕ್ಷ ಕೆ.ಜೆ.ದೇವರಾಜು, ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಾ ರಾಜು, ಯುವ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ಶಿವಮೂರ್ತಿ, ಕಾರ್ಯಾಧ್ಯಕ್ಷ ಶಿವಮಾದೇಗೌಡ, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಜಿಪಂ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ತಾಪಂ.ಮಾಜಿ ಅಧ್ಯಕ್ಷ ಕುಂದೂರು ಪ್ರಕಾಶ್, ಟಿಎಪಿಎಸಿಎಂಎಸ್ ನಿರ್ದೇಶಕರಾದ ಎಂ.ಲಿಂಗರಾಜು, ಟಿ.ಸಿ.ಚೌಡಯ್ಯ, ಪ್ರಕಾಶ್, ತಾ.ಪಂ.ಮಾಜಿ ಉಪಾಧ್ಯಕ್ಷ ಸಿ.ಮಾಧು, ಮುಖಂಡರಾದ ಮಹದೇವು, ರೋಹಿತ್ ಗೌಡ (ದೀಪು), ಶ್ರೀನಿವಾಸ್, ಶ್ರೀಕಾಂತ್, ಚೇತನ್ ನಾಯಕ್ ಇದ್ದರು.