ಸಾರಾಂಶ
ಕನ್ನಡ ಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರ ಹೊರವಲಯದ ಅಗಲಗುರ್ಕಿಯ ಬಿಜಿಎಸ್‌ಇಂಗ್ಲೀಷ್ ಶಾಲೆಯಲ್ಲಿ ಬುಧವಾರ 78ನೇಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಜಿಲ್ಲಾ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಲತಾಕುಮಾರಿ ಅವರು ಧ್ವಜಾರೋಹಣ ಮಾಡಿ ಮಾತನಾಡಿ, ಸ್ವಾತಂತ್ರ್ಯತಂದು ಕೊಡಲು ತ್ಯಾಗ, ಬಲಿದಾನಮಾಡಿದ ಎಲ್ಲರನ್ನು ಸ್ಮರಿಸಿ ಇಂದಿನ ಮಕ್ಕಳು ಅವರ ಆದರ್ಶ ಮತ್ತು ಬದುಕಿನ ಹಾದಿಯನ್ನು ಅರಿತು ದೇಶ ಸೇವೆಗೆ ಮುಂದಾಗಬೇಕು ಎಂದರು.
ದೇಶ ಕಟ್ಟಲು ಕೈಜೋಡಿಸಿವಿದ್ಯಾರ್ಥಿಗಳು ಚೆನ್ನಾಗಿ ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವುದರ ಮೂಲಕ ದೇಶಕಟ್ಟುವಲ್ಲಿ ಕೈಜೋಡಿಸಬೇಕು. ಮಹಾತ್ಮಗಾಂಧಿಜಿಯವರ ಪರಿಕಲ್ಪನೆಗಳಾದ ಸ್ವಚ್ಛಭಾರತ, ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಹೆಜ್ಜೆ ಇಡಬೇಕು. ಶಾಲೆಯಲ್ಲಿ ಕಲಿತ ಶಿಸ್ತು ಇಲ್ಲಿಯೇ ಕೊನೆಯಾಗಬಾರದು. ಇದನ್ನು ಜೀವನವಿಡೀ ಅಳವಡಿಸಿಕೊಳ್ಳಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ಧ್ವಜವಂದನೆಯನ್ನು ಸ್ವೀಕರಿಸಿ ಮಾತನಾಡಿ, ರಾಷ್ಟ್ರಧ್ವಜದಲ್ಲಿರುವ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳು ತ್ಯಾಗ, ಶಾಂತಿ ಮತ್ತು ಸಮೃದ್ಧಿಯ ಸಂಕೇತಗಳಾಗಿವೆ. ಇಂತಹ ಸಂದರ್ಭದಲ್ಲಿ ಮಕ್ಕಳು ಸತ್ಪ್ರಜೆಗಳಾಗಿ ಬೆಳೆದು ದೇಶದ ರಕ್ಷಣೆಗಾಗಿ ಸದಾ ಸಿದ್ಧರಾಗಿರಬೇಕು ಎಂದರು.ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಮಂಗಳನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜಿಎಸ್ ಶಾಲೆಯ ಪ್ರಾಂಶುಪಾಲ ಡಿ.ಸಿ. ಮೋಹನ್‌ಕುಮಾರ್, ಬಿಜಿಎಸ್‌ಪಿ.ಯುಕಾಲೇಜಿನ ಡೀನ್‌ಡಾ. ಮಧುಸೂಧನ್, ಬಿಜಿಎಸ್‌ಪಿ.ಯು ಕಾಲೇಜಿನ ಪ್ರಾಂಶುಪಾಲ ಹೆಚ್.ಬಿ ರಮೇಶ್, ವಾರ್ಡನ್ ಹೆಚ್.ಎಂ.ರಾಜು, ಶಿಕ್ಷಕ ವೃಂದ ಹಾಗೂ ಪೋಷಕರು ಇದ್ದರು.