ಸಾರಾಂಶ
ಬ್ರಿಟಿಷರ ಹಾವಳಿಯಿಂದ ಹೊರ ಬರಲು ಬಹಳಷ್ಟು ದೇಶಗಳು ಹಿಂಸಾಚಾರ ಚಳುವಳಿಗಳನ್ನು ನಡೆಸಿದಂತಹ ಇತಿಹಾಸವಿದೆ. ಪ್ರಪಂಚದಲ್ಲಿ ಅಹಿಂಸಾತ್ಮಕ ನಿಲುವನ್ನು ತಾಳುವ ಮೂಲಕ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬ್ರಿಟಿಷರನ್ನು ಓಡಿಸಿದಂತಹ ದೇಶ ನಮ್ಮ ಭಾರತವಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾಧನೆ ಮತ್ತು ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗವಿರುವ ಕಾವೇರಿ ಉದ್ಯಾನವನದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ೧೫೫ ನೇ ಜನ್ಮ ದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ೧೨೦ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರೂ ಮಹಾನ್ ವ್ಯಕ್ತಿಗಳು. ಇವರಿಬ್ಬರ ಜೀವನದ ಆದರ್ಶಗಳು ಭಾರತ ದೇಶದ ನಾಗರಿಕರಿಗೆ ಮಾದರಿಯಾಗಿವೆ. ಲಾಲ್ ಬಹದ್ದೂರ್ ಶಾಸ್ತ್ರೀ ಅತ್ಯಂತ ಸದೃಢ ಸ್ವಾತಂತ್ರ ಹೋರಾಟಗಾರರಾಗಿ, ಅಂದಿನ ಪ್ರಧಾನಿಯಾಗಿ ಕೃಷಿ ಯೋಜನೆಗಳ ಜೊತೆಗೆ ಇನ್ನೂ ಅನೇಕ ಯೋಜನೆಗಳನ್ನು ಲೋಕ ಕಲ್ಯಾಣಕ್ಕಾಗಿ ಜಾರಿಗೆ ತಂದವರು ಎಂದರು.ಬ್ರಿಟಿಷರ ಹಾವಳಿಯಿಂದ ಹೊರ ಬರಲು ಬಹಳಷ್ಟು ದೇಶಗಳು ಹಿಂಸಾಚಾರ ಚಳುವಳಿಗಳನ್ನು ನಡೆಸಿದಂತಹ ಇತಿಹಾಸವಿದೆ. ಪ್ರಪಂಚದಲ್ಲಿ ಅಹಿಂಸಾತ್ಮಕ ನಿಲುವನ್ನು ತಾಳುವ ಮೂಲಕ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬ್ರಿಟಿಷರನ್ನು ಓಡಿಸಿದಂತಹ ದೇಶ ನಮ್ಮ ಭಾರತವಾಗಿದೆ ಎಂದು ನುಡಿದರು.
ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ ವಿಭಾಗದ ಎಸ್.ಲಿಖಿತ್ ರಾಜು, ಆರ್,ಸುಚಿತ್ರಾ, ಲಕ್ಷಯ್‌ಗೌಡ, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ವಿಜೇತರಾದ ಎನ್.ಸಂಗೀತಾ, ಎಚ್.ಡಿ.ರಕ್ಷಿತಾ, ಪ್ರಜ್ವಲ್, ಪದವಿ/ ಸ್ನಾತಕೋತ್ತರ ವಿಭಾಗದ ಎಸ್.ಯುಕ್ತಿ, ಕೆ.ಪೂಜಾ ಹಾಗೂ ಬಿ.ಎಸ್.ನೇತ್ರಾ ಅವರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಮುಡಾ ಅಧ್ಯಕ್ಷ ನಯೀಮ್, ಮಾಜಿ ಶಾಸಕ ಎಂ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್, ನೆಹರು ಯುವ ಕೇಂದ್ರದ ಹರ್ಷ ಇತರರಿದ್ದರು.