ಗಾಂಧಿ, ಶಾಸ್ತ್ರೀಜಿ ಯುವಕರ ಸ್ಫೂರ್ತಿ

| Published : Oct 04 2025, 01:00 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ತಾಲೂಕಾ ಆಡಳಿತದಿಂದ ತಹಸೀಲ್ದಾರ್‌ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಜಯಂತಿ ಹಾಗೂ ಲಾಲ್‌ ಬಹದ್ದೂರ್‌ ಜಯಂತಿ ಪ್ರಯುಕ್ತ ಭಾವಚಿತ್ರ ಮೆರವಣೆಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗಾಂಧೀಜಿಯವರ ಪ್ರಭಾವ ಜಾಗತಿಕವಾಗಿದೆ. ಏಕತೆ, ಅಹಿಂಸೆ ಮಾರ್ಗ ಮಾನವ ಕುಲಕವನ್ನು ಪ್ರೇರೇಪಿಸುತ್ತವೆ ಎಂದರು.ಪರಕೀಯರ ಹಿಡಿತದಲ್ಲಿ ನಲುಗಿ ಸ್ವಂತ ನೆಲದಲ್ಲೇ ಅತಂತ್ರರಾಗಿ ಬದುಕುತ್ತಿದ್ದ ಭಾರತೀಯರನ್ನು ಸ್ವತಂತ್ರರನ್ನಾಗಿ ಮಾಡಲು ಹಗಲಿರುಳು ಶ್ರಮಿಸಿದರು. ಮಾತ್ರವಲ್ಲದೇ ಸತ್ಯ, ಅಹಿಂಸೆ, ಪ್ರಾಮಾಣಿಕತೆ, ದೇಶಪ್ರೇಮ ಮತ್ತು ದೇಶಭಕ್ತಿಯ ಮೂಲಕ ಸರಳ, ಸಜ್ಜನಿಕೆಯ ಜೀವನ ನಡೆಸಿದರು. ಗಾಂಧೀಜಿಯವರ ಪ್ರಭಾವದಿಂದ ಪ್ರೇರಿತರಾಗಿ ಹಲವು ವಿದ್ಯಾರ್ಥಿ ಯುವಜನರು ಶಾಲಾ ಕಾಲೇಜುಗಳನ್ನು ತೊರೆದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿ ದೇಶಭಕ್ತಿ ಮೆರೆದರು ಎಂದು ತಿಳಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಗಾಂಧಿ ಪುತ್ಥಳಿ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಆದರೆ, ಮೆಗಾ ಮಾರ್ಕೆಟ್‌ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಅದರ ಎದುರಿಗೆ ಗಾಂಧಿ ಪ್ರತಿಮೆ ನಿರ್ಮಿಸಲು ಪುರಸಭೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.ಈ ವೇಳೆ ತಹಸೀಲ್ದಾರ್‌ ಕೀರ್ತಿ ಚಾಲಕ, ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ನಿರ್ದೇಶಕ ಅರವಿಂದ ಹೂಗಾರ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ತಾಲೂಕು ಕೃಷಿ ಅಧಿಕಾರಿ ಸುರೇಶ ಭಾವಿಕಟ್ಟಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿ ಹಲವರು ಇದ್ದರು.