ಸಾರಾಂಶ
ಧರ್ಮಸ್ಥಳ ಸಂಸ್ಥೆ ಕೇವಲ ಸ್ತ್ರೀ ಸಬಲೀಕರಣಕ್ಕೆ ಒತ್ತು ಕೊಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆಕಂಡರೂ ಸಮಾಜದ ಪ್ರಗತಿಗಾಗಿ ಹಲವು ಜನಪರ ಕಾರ್ಯಕ್ರಮ ಹಮ್ಮಿಕೊಂಡು ಅನುಷ್ಟಾನಗೊಳಿಸಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅ.4ರಂದು ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧೀ ಸ್ಮೃತಿ ಮತ್ತು ಪಾನಮುಕ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕೊಣನೂರು ಹನುಮಂತಯ್ಯ ತಿಳಿಸಿದರು.ಪಟ್ಟಣದ ಪತ್ರಕರ್ತರ ಸಂಘದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದಲ್ಲಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ತಾವು ಅಧ್ಯಕ್ಷತೆ ವಹಿಸಲಿದ್ದು, ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೆಶಕ ಜಯರಾಮ್ ನೆಲ್ಲಿತ್ತಾಯ, ರಾಜ್ಯಜನ ಜಾಗೃತಿ ಸಮಿತಿ ನಿಕಟ ಪೂರ್ವ ಅಧ್ಯಕ್ಷ ರಾಮಸ್ವಾಮಿ, ಬೆಳ್ತಂಗಡಿಯ ವಿವೇಕ್ ವಿನ್ಸೆಂಟ್ ಪಾಯಸ್, ಬೆಂಗಳೂರು ಗಾಂಧಿಭವನ ನಿರ್ದೇಶಕ ಜಿ.ಬಿ.ಶಿವರಾಜು, ಉದ್ಯಮಿ ಸ್ಟಾರ್‌ಚಂದ್ರು, ಸಮಾಜ ಸೇವಕ ಜೆ.ಅರ್.ಗೌರೀಶ್, ಜಿಲ್ಲಾ ಉಪಾಧ್ಯಕ್ಷ ಎಂ.ಎಸ್.ಶ್ರೀಕಂಠಸ್ವಾಮಿ, ಕೋಶಾಧಿಕಾರಿ ಚಂದ್ರು, ಸಿಪಿಐ ಕೆ.ಎಸ್. ನಿರಂಜನ್ ಭಾಗವಹಿಸಲಿದ್ದಾರೆ ಎಂದರು.ಧರ್ಮಸ್ಥಳ ಸಂಸ್ಥೆ ಕೇವಲ ಸ್ತ್ರೀ ಸಬಲೀಕರಣಕ್ಕೆ ಒತ್ತು ಕೊಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆಕಂಡರೂ ಸಮಾಜದ ಪ್ರಗತಿಗಾಗಿ ಹಲವು ಜನಪರ ಕಾರ್ಯಕ್ರಮ ಹಮ್ಮಿಕೊಂಡು ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.
ಕೆರೆಗಳ ಹೂಳು ತೆಗೆದು ಅಭಿವೃದ್ಧಿ, ದೇವಸ್ಥಾನಗಳ ಜೀರ್ಣೋದ್ಧಾರ, ವಯಸ್ಸಾದವರಿಗೆ ಜನಮಂಗಳ ಯೋಜನೆ, ವಿದ್ಯಾರ್ಥಿಗಳಿಗೆ ಮಾಸಿಕ ವೇತನ, ಶಿಷ್ಯವೇತನ, ರೈತರಿಗೆ ಕೃಷಿ ಪರಿಕರಗಳು ಮತ್ತುಯಂತ್ರೋಪಕರಣ ವಿತರಣೆ, ಅಂಗವಿಲರ ಅಭಿವೃದ್ಧಿ ಸೇರಿದಂತೆ ಹಲವು ಸಮಾಜಮುಖಿ ಕೆಲಸ ಮಾಡಿಕೊಂಡು ಬರಲಾಗುತ್ತಿದೆ ಎಂದರು.ದುಶ್ಚಟ ಮಕ್ತ ಸಮಾಜ ನಿರ್ಮಾಣಕ್ಕಾಗಿ ಸಂಸ್ಥೆ ಮದ್ಯವ್ಯರ್ಜನ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಿ ಅನೇಕರನ್ನು ಪಾನಮುಕ್ತರನ್ನಾಗಿ ಮಾಡುವಲ್ಲಿ ಯಸ್ಸು ಕಂಡಿದೆ. ಜಿಲ್ಲೆಯಲ್ಲಿ 30 ಶಿಬಿರ ಆಯೋಜಿಸಿದ್ದು, ಸಾವಿರಾರು ಮಂದಿ ದುಶ್ಚಟಗಳಿಂದ ಮುಕ್ತರಾಗಿ ಸಮಾಜದಲ್ಲಿ ಉತ್ತಮ ಬದುಕುಕಟ್ಟಿಕೊಂಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆ ಸದಸ್ಯ ಮಂಜೇಶ್ ಚನ್ನಾಪುರ, ತಾಲೂಕುಯೋಜನಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.