ಸಾರಾಂಶ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ರಾಷ್ಟ್ರೀಯ ನಾಯಕ ಲಾಲ್ ಬಹದ್ದೂರ್ ಶಾಸ್ತಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಪ್ರತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಯಕ್ಷ ಕಲಾಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ರಾಷ್ಟ್ರೀಯ ನಾಯಕ ಲಾಲ್ ಬಹದ್ದೂರ್ ಶಾಸ್ತಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಗಾಂಧಿ ಸ್ಮೃತಿಯ ಅಧ್ಯಕ್ಷತೆ ವಹಿಸಿದ್ದ ಕಾಲೇಜ್‌ನ ಪ್ರಾಂಶುಪಾಲ ವಂ.ಡಾ.ಆಂಟನಿ ಪ್ರಕಾಶ್ ಮೋಂತೆರೋ ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಸೌಮ್ಯತೆಯ ಬಗ್ಗೆ ತಿಳಿಸಿದರು.
ಸರಳತೆ ಮತ್ತು ನೈತಿಕತೆ ಮಹಾನ್ ವಿಶ್ವ ನಾಯಕರಲ್ಲಿ ಅಂತಸ್ತವಾಗಿತ್ತು. ಆದರ್ಶ ಜೀವನ ಶೈಲಿ ಮತ್ತು ಆಚರಣೆಗಳಿಂದ ಪ್ರಪಂಚದಲ್ಲಿ ಜನಾದರಗಳನ್ನು ಹೊಂದಿದ್ದರು ಎಂದು ತಿಳಿಸಿದರು.ಪ್ರಸ್ತುತ ಸಮಾಜದಲ್ಲಿ ನೈತಿಕತೆಯನ್ನು ಹೊಂದಿದ ನಾಯಕರಾ ಅಗತ್ಯತೆಯನ್ನು ಕಂಡುಕೊಳ್ಳಬೇಕು ಮತ್ತು ಗಾಂಧಿ ಸ್ಮರಣೆಯಿಂದ ನಾವೆಲ್ಲರೂ ಸ್ಪೂರ್ತಿಯನ್ನು ಪಡೆದುಕೊಳ್ಳಬೇಕು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವಿಚಾರ ಧಾರೆಗಳು ವಿಸ್ತಾರವಾಗಿ ಜನರಿಗೆ ತಲುಪುವಂತಾಗಬೇಕು ಎಂದು ತಿಳಿಸಿದರು.ಮಹಾತ್ಮರಿಗೆ ನುಡಿನಮನ ಸಲ್ಲಿಸಿದ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಚಂದ್ರಶೇಖರ. ಕೆ, ಅವರು ಮಹಾತ್ಮ ಗಾಂಧೀಜಿಯ ವಿಚಾರಧಾರೆಗಳು ಮತ್ತು ಜೀವನ ಸಾಧನೆಗಳ ಬಗ್ಗೆ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪುಷ್ಪ ಎನ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಯಕ್ಷಕಲಾ ಕೇಂದ್ರದ ನಿರ್ದೇಶಕ ಪ್ರಶಾಂತ್ ರೈ ವಂದಿಸಿದರು.